Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Friday, September 5, 2014

TEACHER'S DAY CELEBRATION


ಶಿಕ್ಷಕರ ದಿನಾಚರಣೆ


ಚೇವಾರು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಮಂಜೇಶ್ವರ: ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.ಸಭಾಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಪರಮೇಶ್ವರ ಪಾವಲುಕೋಡಿ ವಹಿಸಿದರು.ಪೈವಳಿಕೆ ಪಂಚಾಯತು ಸದಸ್ಯೆ ಶ್ರೀಮತಿ ಸುಬೈದಾ ಯಂ.ಪಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯಶಿಕ್ಷಕ ಶ್ರೀ ಶ್ಯಾಮಭಟ್,ದಿನದ ಮಹತ್ವವನ್ನು ವಿವರಿಸಿದರು.ಇದೇ ಸಂದರ್ಭದಲ್ಲಿ  ವಿದ್ಯಾರ್ಥಿಗಳು, ಶಿಕ್ಷಕರ ದಿನಾಚರಣೆ ಅಂಗವಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣವನ್ನು ಆಲಿಸಿದರು.ನಂತರ ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದರು.ಶಂಕರನಾರಾಯಣ ಭಟ್ ಅತಿಥಿಗಳನ್ನು ಸ್ವಾಗತಿಸಿದರು.ರವಿಕುಮಾರ್ ವಂದಿಸಿದರು.ಚೇವಾರು ವಿನೋದ ಕಾರ್ಯಕ್ರಮವನ್ನು ನಿರೂಪಿಸಿದರು.
ಶಿಕ್ಷಕರಿಗೆ ಸ್ಪರ್ಧೆ





ಸಭಾ ಕಾರ್ಯಕ್ರಮದ ಉದ್ಘಾಟನೆ

ಶಿಕ್ಷಕರಿಗೆ ಅಭಿನಂದನೆ


ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ವೈಶಿಷ್ಠ್ಯಪೂರ್ಣವಾಗಿ ಆಚರಿಸಲಾಯಿತು.ಬೆಳಗ್ಗಿನ ಶಾಲಾ ಎಸೆಂಬ್ಲಿಯನ್ನು ಶಿಕ್ಷಕರೇ ನಿರ್ವಹಿಸಿದರು.ವಿದ್ಯಾರ್ಥಿಗಳು ಗುರು ವಂದನೆ ಸಲ್ಲಿಸಿದರು.
ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದರು.ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.

No comments:

Post a Comment