Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Saturday, March 14, 2015

SPORTS DAY


ಚೇವಾರಿನಲ್ಲಿ ರಕ್ಷಕರಿಗೆ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಕ್ರೀಡಾ ಕೂಟ

ಚೇವಾರು ಶ್ರೀ ಶಾರದಾ ಎ.ಯು.ಪಿ.ಶಾಲೆಯಲ್ಲಿ,ವಾರ್ಷಿಕೋತ್ಸವದ ಅಂಗವಾಗಿ, ರಕ್ಷಕರಿಗೆ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಕ್ರೀಡಾ ಕೂಟವನ್ನು ಏರ್ಪಡಿಸಲಾಯಿತು. ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ವಾರ್ಡ್ ಸದಸ್ಯೆ ಶ್ರೀಮತಿ ಸುಬೈದಾ ಯಂ.ಪಿ.,ಕ್ರೀಡೆಗಳು ಮಾನಸಿಕ ಆರೋಗ್ಯವನ್ನು ವೃದ್ಧಿಸುವಲ್ಲಿ ಸಹಕಾರಿ ಎಂದು ಅಭಿಪ್ರಾಯ ಪಟ್ಟರು.ಮುಖ್ಯ ಆತಿಥಿಗಳಾಗಿ ಭಾಗವಹಿಸಿರುವ ಪೈವಳಿಕೆ ಗ್ರಾಮ ಪಂಚಾಯತು ಸದಸ್ಯೆ ಪುಷ್ಪಾ ಕಮಲಾಕ್ಷ ಹಾಗೂ ಮಾತೃ ರಕ್ಷಕ ಸಂಘದ ಅಧ್ಯಕ್ಷೆ ಇಂದಿರಾ ಮಿತ್ತಡ್ಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಶ್ಯಾಮ ಭಟ್,ಶಾಲೆ ಮತ್ತು ಸಮಾಜದ ಬಾಂಧವ್ಯವನ್ನು ಗಟ್ಟಿಗೊಳಿಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದು ಅಭಿಪ್ರಾಯ ಪಟ್ಟರು.ಶಿಕ್ಷಕಿ ಸರಸ್ವತಿ ಅತಿಥಿಗಳನ್ನು ಸ್ವಾಗತಿಸಿದರು.ಪ್ರಸಾದ್ ವಂದಿಸಿದರು.ರವಿ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.ನಂತರ ರಕ್ಷಕರಿಗೆ,ಹಳೆ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು.ರಾಜೇಶ್ವರಿ ಟೀಚರ್,ಪ್ರಮೀಳಾ ಟೀಚರ್,ಪುಷಪಲತಾ ಟೀಚರ್,ಗೋಪಾಲ ಕೃಷ್ಣ ಭಟ್ ಸಹಕರಿಸಿದರು.

No comments:

Post a Comment